×
Ad

ಅತ್ಯಾಚಾರ, ಹತ್ಯೆಗೀಡಾದ ಕಿರಿಯ ವೈದ್ಯೆಯ ಫೋಟೊ ಹಂಚಿಕೆ, ಸಿಎಂ ಮಮತಾಗೆ ಬೆದರಿಕೆ ; ಓರ್ವನ ಬಂಧನ

Update: 2024-08-19 22:07 IST

ಹೊಸದಿಲ್ಲಿ: ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಅತ್ಯಾಚಾರ ಹಾಗೂ ಹತ್ಯೆಗೀಡಾದ ಕಿರಿಯ ವೈದ್ಯೆಯ ಗುರುತು ಬಹಿರಂಗಪಡಿಸಿದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬೆದರಿಕೆ ಒಡ್ಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕೋಲ್ಕತ್ತಾದಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ತಾಲತಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಈ ಬಂಧನ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಕೀರ್ತಿಸೋಶಿಯಲ್’ ಹೆಸರಿನ ಇನ್ಸ್ಟಾಗ್ರಾಂ ಅನ್ನು ಹೊಂದಿರುವ ವ್ಯಕ್ತಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಕುರಿತು ಮೂರು ಕಥನಗಳನ್ನು ಅಪ್ಲೋಡ್ ಮಾಡಿದ್ದರು. ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ವೈದ್ಯೆಯ ಭಾವಚಿತ್ರ ಹಾಗೂ ಗುರುತನ್ನು ಬಹಿರಂಗಪಡಿಸಿದ ಆರೋಪಕ್ಕೆ ಸಂಬಂಧಿಸಿ ಈ ವ್ಯಕ್ತಿಯ ವಿರುದ್ಧ ದೂರು ಸ್ವೀಕರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘‘ಇದೇ ಸಂದರ್ಭ ಆರೋಪಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ಹಾಗೂ ಅವರಿಗೆ ಜೀವ ಬೆದರಿಕೆಯ ಒಡ್ಡುವ ಎರಡು ಕಥನಗಳನ್ನು ಕೂಡ ಹಂಚಿಕೊಂಡಿದ್ದಾರೆ’’ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News