×
Ad

ಉತ್ತರಪ್ರದೇಶ | ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

Update: 2024-11-02 10:15 IST
ಸಾಂದರ್ಭಿಕ ಚಿತ್ರ

ಉತ್ತರಪ್ರದೇಶ : ಬಲ್ಲಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 11ರ ಹರೆಯದ ಬಾಲಕಿಯ ಮೇಲೆ ಆಕೆಯ ಮಾವನೇ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಶವಂತ್ ಬಂಧಿತ ಆರೋಪಿ. ಗದ್ವಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬಸ್ಥರೇ ನೀಡಿದ ದೂರಿನ ಮೇರೆಗೆ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಅನಿಲ್ ಕುಮಾರ್ ಝಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News