×
Ad

ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಲಾಗಿದೆ: ಡಾ. ಕೆ.ಎ. ಪೌಲ್ ಹೇಳಿಕೆ

Update: 2025-07-22 12:43 IST

ನಿಮಿಷಾ ಪ್ರಿಯಾ

ಸನಾ (ಯೆಮೆನ್): ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮರಣದಂಡನೆಯ ಶಿಕ್ಷೆಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ನ ಸಂಸ್ಥಾಪಕ ಡಾ. ಕೆ.ಎ. ಪೌಲ್ ಹೇಳಿದ್ದಾರೆ. ಆದರೆ ಈ ಕುರಿತು ಭಾರತ ಸರ್ಕಾರ, ಯೆಮೆನ್‌ ಹಾಗೂ ನಿಮಿಷಾ ಪ್ರಿಯಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಹೇಳಿಕೆಗಳು ಇದುವರೆಗೂ ಹೊರ ಬಂದಿಲ್ಲ.

ಸೋಮವಾರ ರಾತ್ರಿ ಯೆಮೆನ್‌ ನ ಸನಾದಿಂದ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ ಪೌಲ್ ಅವರು, ಯೆಮೆನ್ ನಾಯಕತ್ವದ ಶಕ್ತಿಯುತ ಮತ್ತು ಪ್ರಾರ್ಥನಾಪೂರ್ವಕ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

"ಇದನ್ನು ದೊಡ್ಡ ಯಶಸ್ಸಿಗೆ ಕೊಂಡೊಯ್ಯುವಲ್ಲಿ ಭಾಗಿಯಾಗಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ದೇವರ ದಯೆಯಿಂದ, ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮಿಷಾ ಅವರನ್ನು ಸುರಕ್ಷಿತವಾಗಿ ಕರೆದೊಯ್ಯಲು ರಾಜತಾಂತ್ರಿಕರನ್ನು ಕಳುಹಿಸಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ," ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News