×
Ad

ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

Update: 2025-01-30 14:56 IST

ನಿರ್ಮಲಾ ಸೀತಾರಾಮನ್ (Photo: PTI)

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಆ ಮೂಲಕ ದಾಖಲೆ ಬರೆಯಲು ಮುಂದಾಗಿದ್ದಾರೆ.

ಈವರೆಗೆ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮಾತ್ರ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದು, ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು.

ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಹಾಗೂ 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಜೆಟ್ ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದರು. ಆದರೆ, ಇವರ್ಯಾರೂ ಸತತ ಎಂಟು ಬಾರಿ ಬಜೆಟ್ ಮಂಡಿಸಲಿರಲಿಲ್ಲ. ಇದೀಗ ಆ ದಾಖಲೆ ನಿರ್ಮಲಾ ಸೀತಾರಾಮನ್ ಪಾಲಾಗಲಿದೆ.

ಮಧ್ಯಮ ವರ್ಗದ ಮೇಲಿನ ಹೊರೆಯನ್ನು ತಗ್ಗಿಸಲು ಹಾಗೂ ಆರ್ಥಿಕತೆಗೆ ಹೆಚ್ಚಿನ ಉತ್ತೇಜನ ನೀಡುವ ದಿಕ್ಕಿನಲ್ಲಿ ನಿರ್ಮಲಾ ಸೀತಾರಾಮನ್ ಈ ಬಾರಿಯ ಕೇಂದ್ರ ಬಜೆಟ್ ಮಂಡಿಸುವ ನಿರೀಕ್ಷೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News