×
Ad

ಬಿಹಾರ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 35% ಮೀಸಲಾತಿ ಘೋಷಿಸಿದ ಸಿಎಂ ನಿತೀಶ್ ಕುಮಾರ್

Update: 2025-07-08 13:50 IST

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Photo: PTI)

ಪಾಟ್ನಾ : ಬಿಹಾರ ರಾಜ್ಯ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 35% ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ನಾರಿ ಶಕ್ತಿ ಅಭಿಯಾನದ ಭಾಗವಾಗಿ ನಿತೀಶ್ ಕುಮಾರ್ ಈ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ. ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಎಲ್ಲಾ ರಾಜ್ಯ ಸರಕಾರಿ ಸೇವೆಗಳು ಅಂದರೆ ಎಲ್ಲಾ ವರ್ಗದ ಮತ್ತು ಹಂತಗಳ ಹುದ್ದೆಗಳ ನೇರ ನೇಮಕಾತಿಯಲ್ಲಿ ಬಿಹಾರದ ಖಾಯಂ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ 35% ಮೀಸಲಾತಿ ನೀಡಲಾಗುವುದು ಎಂದು ನಿತೀಶ್ ಕುಮಾರ್ ಘೋಷಿಸಿದ್ದಾರೆ.

ಇದಲ್ಲದೆ ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು, ಸಬಲೀಕರಣಗೊಳಿಸಲು ʼಬಿಹಾರ ಯುವ ಆಯೋಗʼವನ್ನು ರಚಿಸಲು ಸರಕಾರ ನಿರ್ಧರಿಸಿದೆ. ಇದಕ್ಕೆ ಕೂಡ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News