×
Ad

ಸಂಜೆ 5 ಗಂಟೆಗೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

Update: 2024-01-28 14:20 IST

ನಿತೀಶ್ ಕುಮಾರ್ | Photo: PTI 

ಪಾಟ್ನಾ : ರವಿವಾರ ಸಂಜೆ 5ಕ್ಕೆ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಜೊತೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಆಡಳಿತ ಮೈತ್ರಿಯನ್ನು ಕೊನೆಗೊಳಿಸಿದ ನಿತೀಶ್ ಕುಮಾರ್ ರವಿವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇಬ್ಬರು ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜೊತೆಗೆ ಎಂಟು ಸಚಿವರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು indiatoday.in ವರದಿ ಮಾಡಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News