×
Ad

ʼನೋ ನಾನ್‌ ವೆಜ್‌ ಡೇʼ ಘೋಷಿಸಿದ ಉತ್ತರ ಪ್ರದೇಶ ಸರ್ಕಾರ: ಮಾಂಸದ ಅಂಗಡಿ ಮುಚ್ಚಲು ಆದೇಶ

Update: 2023-11-25 15:55 IST

ಸಾಂದರ್ಭಿಕ ಚಿತ್ರ (PTI)

ಲಕ್ನೋ: ಆಧ್ಯಾತ್ಮಿಕ ನಾಯಕ ಸಾಧು ಟಿಎಲ್ ವಾಸ್ವಾದಿ ಅವರ ಜನ್ಮದಿನದ ಸ್ಮರಣಾರ್ಥ ಉತ್ತರ ಪ್ರದೇಶ ಸರ್ಕಾರ ಶನಿವಾರ ರಾಜ್ಯದ ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶಿಸಿದೆ ಎಂದು ʼದಿ ಹಿಂದೂʼ ವರದಿ ಮಾಡಿದೆ.

ಉತ್ತರ ಪ್ರದೇಶ ಸರ್ಕಾರದ ವಿಶೇಷ ಕಾರ್ಯದರ್ಶಿ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರ ಅಧಿಕೃತ ಹೇಳಿಕೆಯ ಪ್ರಕಾರ ಆದಿತ್ಯನಾಥ್ ಸರ್ಕಾರವು ನವೆಂಬರ್ 25 ರನ್ನು "ನೋ ನಾನ್ ವೆಜ್ ಡೇ" ಎಂದು ಘೋಷಿಸಿದೆ.

ರಾಜ್ಯಾದ್ಯಂತ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಉತ್ತರ ಪ್ರದೇಶ ಸರ್ಕಾರವು ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಪದಾರ್ಥಗಳ ಮಾರಾಟ, ಉತ್ಪಾದನೆ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿದ ಕೆಲವು ದಿನಗಳ ಬೆನ್ನಲ್ಲೇ ಈ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News