ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ | ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ : ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್
Update: 2025-09-28 13:42 IST
Photo credit: PTI
ಚೆನ್ನೈ : ಕರೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ. ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದ ತನಿಖಾ ಸಮಿತಿಯ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಮೃತರ ಕುಟುಂಬಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸ್ಟಾಲಿನ್, ಈ ಬಗ್ಗೆ ನಾನು ಯಾವುದೇ ರಾಜಕೀಯ ಹೇಳಿಕೆ ನೀಡಲು ಬಯಸುವುದಿಲ್ಲ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾಲ್ತುಳಿತದ ಹಿನ್ನೆಲೆ ಆಸ್ಪತ್ರೆಗೆ ಭೇಟಿ ನೀಡಿದ ಸ್ಟಾಲಿನ್ ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಕರೂರಿನಲ್ಲಿ ಶನಿವಾರ ಸಂಜೆ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಕ್ಕಳು, 17 ಮಹಿಳೆಯರು ಸೇರಿದಂತೆ ಕನಿಷ್ಠ 39 ಜನರು ಮೃತಪಟ್ಟಿದ್ದರು.