ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ, ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ನೋಟಿಸ್‌

Update: 2024-04-25 07:40 GMT

ಹೊಸದಿಲ್ಲಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳಿಗಾಗಿ ಚುನಾವಣಾ ಆಯೋಗ ಇಂದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಪ್ರಧಾನಿ ಮೋದಿ ದ್ವೇಷದ ಭಾಷಣ ನೀಡಿದ್ದಾರೆಂದು ಕಾಂಗ್ರೆಸ್‌ ದೂರಿದ್ದರೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ವಿಭಜನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆಂದು ಬಿಜೆಪಿ ದೂರಿತ್ತು.

ಎಪ್ರಿಲ್‌ 29, ಸೋಮವಾರ ಬೆಳಿಗ್ಗೆ 11 ಗಂಟೆಯೊಳಗಾಗಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಬೇಕೆಂದು ಆಯೋಗ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News