×
Ad

ಒಡಿಶಾದಲ್ಲಿ ಮಹಿಳೆಯ ಅಪಹರಿಸಿ ಅತ್ಯಾಚಾರ

Update: 2025-06-19 20:57 IST

ಸಾಂದರ್ಭಿಕ ಚಿತ್ರ

ಬರಿಪಾಡ: ನಾಲ್ವರ ಗುಂಪೊಂದು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ವರದಿಯಾದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ. ಬರಿಪಾಡ ಸದರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮಹಿಳೆಯ ಪತಿ ಹಾಗೂ ಇತರ ಕುಟುಂಬ ಸದಸ್ಯರು ಇಲ್ಲದ ಸಮಯದಲ್ಲಿ ನಾಲ್ವರು ಪರಿಚಿತರು ಮನೆಯೊಳಗೆ ಪ್ರವೇಶಿಸಿ, ಆಕೆಯನ್ನು ಬಲವಂತವಾಗಿ ಹೊರಗೊಯ್ದು, ಇನ್ನೊಂದು ಪೊಲೀಸ್ ಠಾಣೆಯ ವ್ಯಾಪ್ತಿ ಯ ಪ್ರದೇಶದಲ್ಲಿ ಸರಣಿ ಅತ್ಯಾಚಾರವೆಸಗಿದ್ದಾರೆಂದು ಸಂತ್ರಸ್ತೆಯ ಪತಿ ದೂರಿನಲ್ಲಿ ತಿಳಿಸಿದ್ದಾರೆ.

ಅತ್ಯಾಚಾರವೆಸಗಿದ ನಾಲ್ವರು ಆರೋಪಿಗಳನ್ನು ಮಹಿಳೆ ಗುರುತಿಸಿದ್ದು, ಅವರೆಲ್ಲರೂ ಪರಾರಿಯಾಗಿದ್ದಾರೆ. ಅವರನ್ನು ಸೆರೆಹಿಡಿಯಲು ತಂಡವೊಂದನ್ನು ರಚಿಸಲಾಗಿದೆಯೆಂದು ಬರಿಪಾಡ ಸದರ್ ಪೊಲೀಸ್ ಠಾಣಾ ಉಸ್ತುವಾರಿ ಇನ್ಸ್‌ಪೆಕ್ಟರ್ ಆದಿತ್ಯ ಪ್ರಸಾದ್ ಜೇನಾ ತಿಳಿಸಿದ್ದಾರೆ.

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆಯೆಂದು ತಿಳಿದುಬಂದಿದೆ.

ರಾಜ್ಯದ ಇತರ ಎರಡು ಜಿಲ್ಲೆಗಳಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಈ ಘಟನೆ ನಡೆದಿದೆ. ರವಿವಾರದಂದು ಗೋಪಾಲಪುರ ಬೀಚ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಕಿಯೊಂಜ್‌ಹಾರ್ ಜಿಲ್ಲೆಯಲ್ಲಿ ಮಂಗಳವಾರ 17 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯನ್ನು ಮರಕ್ಕೆ ನೇತುಹಾಕಿ ಕೊಲೆಗೈದ ಘಟನೆ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News