×
Ad

ಮಹಾರಾಷ್ಟ್ರ | ಕಾರ್ಖಾನೆಯೊಂದರಲ್ಲಿ ಸ್ಪೋಟ : ಓರ್ವ ಮೃತ್ಯು, ಏಳು ಮಂದಿಗೆ ಗಾಯ

Update: 2025-09-04 12:33 IST

ಸಾಂದರ್ಭಿಕ ಚಿತ್ರ 

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಜಾರ್‌ಗಾಂವ್‌ನಲ್ಲಿರುವ ಸೌರ ಸ್ಫೋಟಕಗಳ ಆರ್‌ಡಿಎಕ್ಸ್‌ ಘಟಕದಲ್ಲಿ ಮಧ್ಯರಾತ್ರಿ 12:30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News