×
Ad

ವಕ್ಫ್ ಸದನ ಸಮಿತಿಯ ಅವಧಿಯನ್ನು ವಿಸ್ತರಿಸಲು ವಿರೋಧ ಪಕ್ಷಗಳ ಆಗ್ರಹ

Update: 2024-11-21 20:08 IST

PTI File Photo

ಹೊಸದಿಲ್ಲಿ: ವಕ್ಫ್ ಶಾಸನ ಕರಡು ಪ್ರತಿಗೆ ಮಾಡಲಾಗಿರುವ ಮಾರ್ಪಾಡುಗಳನ್ನು ಅಧ್ಯಯನ ಮಾಡಲು ನಮಗೆ ಇನ್ನಷ್ಟು ಸಮಯಾವಕಾಶದ ಅಗತ್ಯವಿರುವುದರಿಂದ, ವಕ್ಫ್ ತಿದ್ದುಪಡಿ ಮಸೂದೆ ಪರಿಶೀಲನೆಗೆ ರಚಿಸಲಾಗಿರುವ ಜಂಟಿ ಸದನ ಸಮಿತಿಯ ಅವಧಿಯನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಗುರುವಾರ ವಿರೋಧ ಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.

ಗುರುವಾರ ನಡೆಯಲಿರುವ ಸಭೆಯು ಜಂಟಿ ಸದನ ಸಮಿತಿಯ ಕೊನೆಯ ಸಭೆಯಾಗಿರಲಿದೆ ಹಾಗೂ ಆದಷ್ಟೂ ಶೀಘ್ರವಾಗಿ ಸದಸ್ಯರಿಗೆ ಕರಡು ವರದಿಯನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಜಂಟಿ ಸದನ ಸಮಿತಿಯ ಅಧ್ಯಕ್ಷ ಹಾಗೂ ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಸಮಿತಿಯ ಸಭೆಯ ನಡುವೆ ಪ್ರಕಟಿಸಿದರು.

ಈ ಪ್ರಕಟಣೆಯನ್ನು ಪ್ರತಿಭಟಿಸಿದ ವಿರೋಧ ಪಕ್ಷಗಳ ಸದಸ್ಯರು, ಸಭೆಯಲ್ಲಿ ಘೋಷಣೆಗಳನ್ನು ಕೂಗಿದರು ಹಾಗೂ ಈ ಪೈಕಿ ಕೆಲವು ಸದಸ್ಯರು ಈ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಸೋಮವಾರದಿಂದ ಪ್ರಾರಂಭಗೊಳ್ಳಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನದಂದು ತನ್ನ ವರದಿಯನ್ನು ಸಲ್ಲಿಸಬೇಕು ಎಂದು ಜಂಟಿ ಸದನ ಸಮಿತಿಗೆ ಲೋಕಸಭೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News