×
Ad

ತಮಿಳುನಾಡಿಗೆ ಪ್ರತಿದಿನ 5000 ಕ್ಯುಸೆಕ್ಸ್ ನೀರು ಹರಿಸಲು ಆದೇಶ

Update: 2023-09-18 18:25 IST

KRS | Photo: PTI 

ಹೊಸದಿಲ್ಲಿ : ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೋಮವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆದಿದ್ದು, ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ. ಮುಂದಿನ 15 ದಿನಗಳವರೆಗೆ 5 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಆದೇಶದಲ್ಲಿ ವಿವರಿಸಲಾಗಿದೆ.

ಕರ್ನಾಟಕ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಮಳೆಯ ಕೊರತೆ, ಬರಗಾಲದಿಂದ ಕಾವೇರಿ ಹಾಗೂ ಕೃಷ್ಣಾ ಕಣಿವೆಯಲ್ಲಿ ಭಾರಿ ನೀರಿನ ಕೊರತೆ ಕಾಣಿಸಿಕೊಂಡಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ವಿವರಿಸಿದೆ. ಈ ಮಧ್ಯೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಈ ಆದೇಶವು, ರಾಜ್ಯದ ಪಾಲಿಗೆ ಬಿಸಿ ತುಪ್ಪವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News