ಸತತ 9ನೇ ದಿನವೂ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಭಾರತೀಯ ಸೇನೆಯಿಂದ ತಕ್ಕ ಪ್ರತಿಕ್ರಿಯೆ
Update: 2025-05-03 10:25 IST
ಸಾಂದರ್ಭಿಕ ಚಿತ್ರ | PC : NDTV
ಹೊಸದಿಲ್ಲಿ: ಪಾಕಿಸ್ತಾನ ಸೇನೆಯು ಸತತ ಒಂಭತ್ತನೇ ರಾತ್ರಿ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪೋಸ್ಟ್‌ಗಳ ಕಡೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಕೇಂದ್ರ ರಕ್ಷಣಾ ಸಚಿವಾಲಯದ ಹೇಳಿಕೆಯ ಪ್ರಕಾರ, "ಮೇ 2 ಮತ್ತು ಮೇ 3 ರ ರಾತ್ರಿ, ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಕುಪ್ವಾರಾ, ಉರಿ ಮತ್ತು ಅಖ್ನೂರ್ ಪ್ರದೇಶಗಳ ಎದುರು ಎಲ್‌ಒಸಿಯಲ್ಲಿ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದೆ. ಸೇನೆ ತ್ವರಿತವಾಗಿ ಪ್ರತಿಕ್ರಿಯಿಸಿದೆ".
ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.