×
Ad

ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಮಿತಿಯ ಅವಧಿ ವಿಸ್ತರಣೆಗೆ ಸಂಸತ್ತಿನ ಅನುಮೋದನೆ

Update: 2024-11-28 16:41 IST

PC : ANI 

ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ಅವಧಿ ವಿಸ್ತರಣೆಗೆ ಲೋಕಸಭೆಯಲ್ಲಿ ಧ್ವನಿ ಮತದ ಅನುಮೋದನೆ ದೊರೆತಿದೆ.

ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ಜಂಟಿ ಸಮಿತಿಯ ಅವಧಿಯನ್ನು 2025ರ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸಲಾಗಿದೆ. ಈ ಅಧಿವೇಶನ ಸಾಮಾನ್ಯವಾಗಿ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಯಲಿದೆ. ಗುರುವಾರ ಲೋಕಸಭೆಯಲ್ಲಿ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನಿರ್ಣಯವನ್ನು ಮಂಡಿಸಿದ್ದು, ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಂಸದೀಯ ಸಮಿತಿಯ ಸಭೆಗಳು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ. ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತಿಲ್ಲ ಎಂದು ಇತ್ತೀಚೆಗೆ ಸಮಿತಿಯ ಕೆಲ ಸದಸ್ಯರು ಸ್ಪೀಕರ್ ಗೆ ದೂರನ್ನು ನೀಡಿದ್ದರು. ಇದಲ್ಲದೆ ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಮಿತಿಯ ಅವಧಿಯನ್ನು ವಿಸ್ತರಿಸಲು ಗುರುವಾರ ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News