×
Ad

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

Update: 2025-04-02 12:23 IST

Photo credit: ANI

ಹೊಸದಿಲ್ಲಿ: ಮುಸ್ಲಿಂ ಸಂಘಟನೆಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಹಾಗೂ ವಿರೋಧ ಪಕ್ಷಗಳಿಂದಲೂ ವಿರೋಧಕ್ಕೆ ಒಳಗಾಗಿರುವ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಇಂದು (ಬುಧವಾರ) ಮಧ್ಯಾಹ್ನ ಲೋಕಸಭೆಯಲ್ಲಿ ಮಂಡಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.

ಮುಸ್ಲಿಂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಚರ್ಚೆಗೆ ಕಾರ್ಯಕಲಾಪಗಳ ಸಲಹಾ ಸಮಿತಿ ಎಂಟು ಗಂಟೆಗಳ ಕಾಲಾವಕಾಶವನ್ನು ನಿಗದಿಗೊಳಿಸಿದೆ. ಅಗತ್ಯ ಬಿದ್ದರೆ ಈ ಅವಧಿ ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯೂ ಇದೆ.

ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಗೆ ಇಂದೇ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಕೇಂದ್ರ ಸರಕಾರ ತುದಿಗಾಲಲ್ಲಿ ನಿಂತಿದೆ. ಒಂದು ವೇಳೆ ಈ ಮಸೂದೆಯೇನಾದರೂ ಇಂದೇ ಲೋಕಸಭೆಯಲ್ಲಿ ಅಂಗೀಕಾರಗೊಂಡರೆ, ನಾಳೆಯೇ ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಮಂಡಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News