×
Ad

ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿತ : ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ

Update: 2025-01-11 16:54 IST

Photo credit: NDTV

ಕನೌಜ್: ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಹತ್ತಾರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರೈಲು ನಿಲ್ದಾಣದ ಅಭಿವೃದ್ಧಿ ಯೋಜನೆಯ ಭಾಗವಾಗಿ ಎರಡು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಶನಿವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಘಟನೆ ಸಂಭವಿಸಿದೆ.

ಕಟ್ಟಡ ಕುಸಿತದ ಸಮಯದಲ್ಲಿ ಸುಮಾರು 35 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಸ್ಥಳದಲ್ಲಿ ರೈಲ್ವೆ ಪೊಲೀಸರು ಜಿಲ್ಲಾಡಳಿತದ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಈವರೆಗೆ 23 ಕಾರ್ಮಿಕರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.

ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಅವಶೇಷಗಳಡಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಾವು ನಮ್ಮಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ರಕ್ಷಣಾ ಪ್ರಯತ್ನಗಳಿಗಾಗಿ ಬಳಸುತ್ತಿದ್ದೇವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶುಭ್ರಂತ್ ಕುಮಾರ್ ಶುಕ್ಲ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News