×
Ad

ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ ಪ್ರಯಾಣಿಕ ವಶಕ್ಕೆ

Update: 2023-09-20 22:03 IST

ಸಾಂದರ್ಭಿಕ ಚಿತ್ರ.| Photo: PTI

ಚೆನ್ನೈ: ಅಹಿತಕರ ಘಟನೆಯೊಂದರಲ್ಲಿ ಮಂಗಳವಾರ ರಾತ್ರಿ ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ವಿಮಾನವು ಚೆನ್ನೆಗೆ ಬಂದಿಳಿದ ಬಳಿಕ ಮಣಿಕಂಡನ್ ಎಂದು ಗುರುತಿಸಲಾಗಿರುವ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿತ್ತು. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು,ಈ ಬಗ್ಗೆ ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News