×
Ad

ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ ಸುರೀಂದರ್ ಚಾವ್ಲಾ ರಾಜೀನಾಮೆ

Update: 2024-04-09 21:36 IST

ಹೊಸದಿಲ್ಲಿ : ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ (ಪಿಪಿಬಿಎಲ್‌) ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಸಿಇಒ ಹುದ್ದೆಗೆ ಸುರೀಂದರ್ ಚಾವ್ಲಾ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಕಂಪನಿಯು ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಇದನ್ನು ಉಲ್ಲೇಖಿಸಿದೆ.

ಸುರೀಂದರ್ ಚಾವ್ಲಾ ಅವರು ವೈಯಕ್ತಿಕ ಕಾರಣಗಳಿಂದಾಗಿ ಏಪ್ರಿಲ್ 8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

2023ರ ಜನವರಿಯಲ್ಲಿ ಅವರು ಪೇಟಿಎಂ ಬ್ಯಾಂಕ್‌ಗೆ ಸೇರ್ಪಡೆಯಾಗಿದ್ದರು. ಇತ್ತೀಚಿಗಷ್ಟೇ ಆರ್‌ ಬಿ ಐ ಪೇಟಿಎಂ ನ ವ್ಯವಹಾರಗಳ ಮೇಲೆ ನಿರ್ಬಂಧ ಹೇರಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News