×
Ad

ಪರ್ಲ್ ಆಗ್ರೋ ಕಾರ್ಪೊರೇಷನ್ ಲಿ.ಪ್ರಕರಣ | ಒಂಭತ್ತು ರಾಜ್ಯಗಳಲ್ಲಿ ಈಡಿ ಶೋಧ ಕಾರ್ಯಾಚರಣೆ

Update: 2024-10-06 22:42 IST

PC : PTI 

ಹೊಸದಿಲ್ಲಿ : ಪರ್ಲ್ ಆಗ್ರೋ ಕಾರ್ಪೊರೇಷನ್ ಲಿ.(ಪಿಎಸಿಎಲ್) ಮತ್ತು ಸಮೂಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ)ವು ದಿಲ್ಲಿ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಉತ್ತರಾಖಂಡಗಳ 44 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳಡಿ ಅ.4ರಂದು ಈ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಈ ಸಂದರ್ಭದಲ್ಲಿ ವಿವಿಧ ದೋಷಾರೋಪಕ್ಕೆ ಪೂರಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಈಡಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಶುಕ್ರವಾರ ಈಡಿ ಚಿಟ್‌ಫಂಡ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋಲ್ಕತಾ, ಪಂಜಾಬ್, ದಿಲ್ಲಿ ಮತ್ತು ಮುಂಬೈಗಳಲ್ಲಿ ಸರಣಿ ದಾಳಿಗಳನ್ನು ನಡೆಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News