×
Ad

ಟಿವಿ ಸುದ್ದಿ ವಾಹಿನಿಗಳನ್ನು ನಿಯಂತ್ರಿಸುವಂತೆ ಕೋರಿ ಅರ್ಜಿ: ನಿಮಗೆ ಇಷ್ಟವಿಲ್ಲದಿದ್ದರೆ ವೀಕ್ಷಿಸಬೇಡಿ ಎಂದ ಸುಪ್ರೀಂ ಕೋರ್ಟ್

Update: 2023-08-08 23:50 IST

 ಸುಪ್ರೀಂ ಕೋರ್ಟ್. | Photo: PTI 

ಹೊಸದಿಲ್ಲಿ: ಟೆಲಿವಿಷನ್ ಸುದ್ದಿ ವಾಹಿನಿಗಳು ಹಾಗೂ ಅವುಗಳು ಪ್ರಸಾರ ಮಾಡುವ ವಿಷಯಗಳನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಈ ವಾಹಿನಿಗಳನ್ನು ನೋಡಬೇಕೇ, ಬೇಡವೇ ಎಂಬುದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ವೀಕ್ಷಕರಿಗೆ ಇದೆ ಎಂದು ನ್ಯಾಯಮೂರ್ತಿ ಅಭಯ್ ಓಕ್ಲಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಿಸಿತು.

ಎಲ್ಲಾ ವಿಷಯಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಪ್ರವೃತ್ತಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಪೀಠ, ದೂರುದಾರರು ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಿಲ್ಲ ಯಾಕೆ ಎಂದು ಪ್ರಶ್ನಿಸಿತು. ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಧೀಶರ ಕುರಿತ ಹೇಳಿಕೆ ಬಗ್ಗೆ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ‘‘ನಾವು ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರಿಗೆ ಮಾರ್ಗಸೂಚಿಗಳನ್ನು ನೀಡುವವರು ಯಾರು?’’ ಎಂದು ಪ್ರಶ್ನಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News