×
Ad

ನೂತನ ಕ್ರಿಮಿನಲ್ ಕಾನೂನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

Update: 2024-01-01 22:20 IST

ಸುಪ್ರೀಂ ಕೋರ್ಟ್‌ \ Photo : PTI 

ಹೊಸದಿಲ್ಲಿ: ಸಂಸತ್ತಿನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾದ ಮೂರು ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ದಿಲ್ಲಿ ಮೂಲದ ನ್ಯಾಯವಾದಿ ವಿಶಾಲ್ ತಿವಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅವರು ನಾಗರಿಕರ ಸ್ವಾತಂತ್ರ್ಯವನ್ನು ಹತ್ತಿಕ್ಕುವುದನ್ನು ಮುಂದುವರಿಸಿದ್ದಾರೆ ಹಾಗೂ ಸಾಕಷ್ಟು ಚರ್ಚೆ ನಡೆಸದೆ ಮಸೂದೆಯನ್ನು ಅಂಗೀಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನೂತನ ಕಾನೂನು ವಸಾಹತುಶಾಹಿಯ ಕುರುಹುಗಳನ್ನು ಸಂಪೂರ್ಣವಾಗಿ ತೊಡೆದು ಹಾಕಿಲ್ಲ ಎಂದು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಿದ್ದಾರೆ.

ಈ ವಿಷಯ ತುಂಬಾ ಸೂಕ್ಷ್ಮವಾಗಿರುವುದರಿಂದ ಹಾಗೂ ಮೂರು ನೂತನ ಕಾನೂನುಗಳು ನ್ಯಾಯ ವಿತರಣೆಯನ್ನು ಒಳಗೊಂಡಿರುವುದರಿಂದ ತನ್ನ ಅರ್ಜಿ ಸುಪ್ರೀಂ ಕೋರ್ಟ್‌ನ ಮುಂದೆ ವಿಚಾರಣೆಗೆ ಬರಲಿದೆ ಎಂದು ನಿರೀಕ್ಷಿಸುತ್ತೇನೆ ಎಂದು ತಿವಾರಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News