ಅಹ್ಮದಾಬಾದ್‌ನಲ್ಲಿ ವಿಮಾನ ಪತನ: ವಸತಿ ಸಂಕೀರ್ಣದ ಟೆರೇಸ್‌ನಲ್ಲಿ ವಿಮಾನದ ಅವಶೇಷಗಳು
Photo credit: PTI
ಅಹ್ಮದಾಬಾದ್: ಅಹ್ಮದಾಬಾದ್‌ನಲ್ಲಿ ಗುರುವಾರ ಅಪರಾಹ್ನ ಏರ್‌ಇಂಡಿಯಾದ ವಿಮಾನವೊಂದು ಕಟ್ಟಡಕ್ಕೆ ಢಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ. ವಸತಿ ಸಂಕೀರ್ಣದ ಟೆರೇಸ್‌ನಲ್ಲಿ ವಿಮಾನದ ಅವಶೇಷಗಳು ಬಿದ್ದುಕೊಂಡಿರುವುದನ್ನು ವೀಡಿಯೊ ದೃಶ್ಯಾವಳಿಗಳು ತೋರಿಸಿವೆ.
ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ಕೆಲವೇ ಹೊತ್ತಿನಲ್ಲಿ ದುರಂತ ಸಂಭವಿಸಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು.
ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆಯೇಳುತ್ತಿದ್ದು,ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.
ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗುಜರಾತ್ ಮಖ್ಯಮಂತ್ರಿ ಭೂಪೇಂದ್ರ ಪಟೇಲ್,ರಾಜ್ಯದ ಗೃಹಸಚಿವರು ಮತ್ತು ಅಹ್ಮದಾಬಾದ್ ಪೋಲಿಸ್ ಆಯುಕ್ತರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು,ಕೇಂದ್ರ ಸರಕಾರದಿಂದ ಸಂಪೂರ್ಣ ನೆರವಿನ ಭರವಸೆ ನೀಡಿದ್ದಾರೆ.
ಪತನಕ್ಕೆ ಕಾರಣ ಮತ್ತು ಪ್ರಯಾಣಿಕರ ಸ್ಥಿತಿಗತಿ ಬಗ್ಗೆ ವಿವರಗಳು ಇನ್ನಷ್ಟೇ ಲಭಿಸಬೇಕಿವೆ.