ಅಜಿತ್ ಪವಾರ್ ಮೃತಪಟ್ಟ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ
Update: 2026-01-28 12:33 IST
Photo credit: X/ ANI
ಮುಂಬೈ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮೃತಪಟ್ಟ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಹೇಳಿದ್ದಾರೆ.
ವಿಮಾನ ದುರಂತ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಏಕನಾಥ್ ಶಿಂಧೆ, ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ.
"ಮಹಾರಾಷ್ಟ್ರಕ್ಕೆ ಇಂದು ಕರಾಳ ದಿನ. ರಾಜ್ಯಕ್ಕೆ ಇದು ದುಃಖದ ಸುದ್ದಿ. ಅಜಿತ್ ಪವಾರ್ ಆಡಳಿತದ ಮೇಲೆ ಬಲವಾದ ಹಿಡಿತ ಹೊಂದಿದ್ದರು. ಅವರು ವಿದ್ಯಾವಂತರು, ಸ್ಪಷ್ಟವಾಗಿ ಮಾತನಾಡುವವರು ಮತ್ತು ಕಠಿಣ ಪರಿಶ್ರಮಿಯಾಗಿದ್ದರು. ನಾನು ಅವರ ಜೊತೆ ಸಂಪುಟದಲ್ಲಿ ಕೆಲಸ ಮಾಡಿದ್ದೇನೆ. ನಾವು ಒಂದು ತಂಡವಾಗಿ ಕೆಲಸ ಮಾಡಿದ್ದೇವೆ" ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.