×
Ad

Odisha| ರೂರ್ಕೆಲಾದಿಂದ ಭುವನೇಶ್ವರಕ್ಕೆ ಹಾರಾಟ ನಡೆಸುತ್ತಿದ್ದ ಲಘು ವಿಮಾನ ಪತನ

Update: 2026-01-10 16:16 IST

Photo credit: indiatoday.in

ಭುವನೇಶ್ವರ: ರೂರ್ಕೆಲಾದಿಂದ ಭುವನೇಶ್ವರಕ್ಕೆ ಹಾರಾಟ ನಡೆಸುತ್ತಿದ್ದ ಇಂಡಿಯಾ ಒನ್ ಏರ್( IndiaOne Air ) ಲಘು ವಿಮಾನ ಶನಿವಾರ ಒಡಿಶಾದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿ ಆರು ಮಂದಿ ಪ್ರಯಾಣಿಕರು ಮತ್ತು ಒಬ್ಬ ಪೈಲಟ್ ಸೇರಿದಂತೆ ಏಳು ಜನರಿದ್ದರು. ರೂರ್ಕೆಲಾದಿಂದ ಸುಮಾರು 10 ರಿಂದ 15 ಕಿಲೋಮೀಟರ್ ದೂರದಲ್ಲಿ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.

ರಕ್ಷಣಾ ತಂಡಗಳು ಅಪಘಾತದ ಸ್ಥಳಕ್ಕೆ ತೆರಳಿ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಪ್ರವಾಸೋದ್ಯಮ ಇಲಾಖೆಯ ತಂಡವು ಭುವನೇಶ್ವರದಿಂದ ಆಗಮಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಪತನದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರವೇ ಘಟನೆ ಬಗ್ಗೆ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News