ಭೂತಾನ್ ನಿಂದ ಹಿಂದಿರುಗಿದ ತಕ್ಷಣ ಕೆಂಪುಕೋಟೆ ಸ್ಫೋಟದ ಗಾಯಾಳುಗಳನ್ನು ಭೇಟಿಯಾದ ಪ್ರಧಾನಿ ಮೋದಿ
Photo:X/@narendramodi
ಹೊಸದಿಲ್ಲಿ: ಭೂತಾನ್ ನಿಂದ ಎರಡು ದಿನಗಳ ಅಧಿಕೃತ ಪ್ರವಾಸ ಮುಗಿಸಿಕೊಂಡು ಬುಧವಾರ ದಿಲ್ಲಿಗೆ ಮರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೇರವಾಗಿ ಲೋಕ ನಾಯಕ್ ಜಯಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪುಕೋಟೆಯ ಬಳಿ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು.
ರಾಷ್ಟ್ರ ರಾಜಧಾನಿಯ ಪ್ರಮುಖ ಸ್ಮಾರಕವಾಗಿರುವ ಕೆಂಪುಕೋಟೆಯ ಬಳಿ ನಡೆದ ಸ್ಫೋಟದಲ್ಲಿ ಕನಿಷ್ಠ 13 ಮಂದಿ ಮೃತರಾಗಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ನಂತರ ತುರ್ತು ಸೇವಾ ಸಿಬ್ಬಂದಿ ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದವು.
ಪ್ರಧಾನಿ ಮೋದಿ ಅವರು ಆಸ್ಪತ್ರೆಯಲ್ಲಿ ಗಾಯಾಳುಗಳೊಂದಿಗೆ ಸಂವಾದ ನಡೆಸಿ, ಅವರ ಶೀಘ್ರ ಚೇತರಿಕೆಗೆ ಹಾರೈಸಿದರು. ಈ ವೇಳೆ ವೈದ್ಯಾಧಿಕಾರಿಗಳು ಮತ್ತು ಆಸ್ಪತ್ರೆಯ ಆಡಳಿತ ತಂಡವು ಚಿಕಿತ್ಸೆ ಕ್ರಮಗಳ ಕುರಿತು ಪ್ರಧಾನಿಗೆ ಮಾಹಿತಿ ನೀಡಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.