×
Ad

ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

Update: 2025-12-25 12:45 IST

Photo credit: X/@narendramodi

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.

ಪ್ರಾರ್ಥನಾ ಸಭೆಯಲ್ಲಿ ಕರೋಲ್‌ಗಳು, ಸ್ತುತಿಗೀತೆಗಳು ಹಾಗೂ ವಿಶೇಷ ಪೂಜಾಕ್ರಿಯೆಗಳು ನಡೆಯಿತು. ದಿಲ್ಲಿ ಮತ್ತು ಉತ್ತರ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಪ್ರಾರ್ಥನೆ ಸಲ್ಲಿಸಿದರು. ದಿಲ್ಲಿಯ ಬಿಷಪ್ ಡಾ. ಪೌಲ್ ಸ್ವರೂಪ್ ಅವರ ನೇತೃತ್ವದಲ್ಲಿ ಪೂಜಾ ವಿಧಿಗಳು ನೆರವೇರಿದವು. ಈ ಸಂದರ್ಭದಲ್ಲಿ ಪ್ರಧಾನಿಗಾಗಿ ವಿಶೇಷ ಪ್ರಾರ್ಥನೆಯನ್ನೂ ನಡೆಸಲಾಯಿತು.

ಪ್ರಾರ್ಥನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ದಿಲ್ಲಿಯ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದೆ. ಈ ಪ್ರಾರ್ಥನೆಯು ಪ್ರೀತಿ, ಶಾಂತಿ ಮತ್ತು ಸಹಾನುಭೂತಿಯ ಕಾಲಾತೀತ ಸಂದೇಶವನ್ನು ಸಾರುತ್ತದೆ. ಕ್ರಿಸ್‌ಮಸ್‌ನ ಚೈತನ್ಯವು ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ ಎಂದು ಆಶಿಸಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News