×
Ad

ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ

Update: 2025-05-07 16:39 IST

Photo credit: PTI

ಹೊಸದಿಲ್ಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ಗುರಿಗಳನ್ನು ನಾಶಪಡಿಸಲು ಇಂದು (ಬುಧವಾರ) ಮುಂಜಾನೆ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬೆನ್ನಿಗೇ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು.

ಅಲ್ಲದೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಂತರದ ಪರಿಸ್ಥಿತಿಯನ್ನು ಪರಾಮರ್ಶಿಸಲು ಅವರು ಭದ್ರತಾ ಸಮಿತಿಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನೂ ವಹಿಸಲಿದ್ದಾರೆ.

ಇಂದು ಮಧ್ಯರಾತ್ರಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ಈ ಸಭೆಯಲ್ಲಿ ನಿರ್ಣಯವೊಂದನ್ನು ಅಂಗೀಕರಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.

ಸಭೆಗೂ ಮುನ್ನ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ವಿವರಣೆ ನೀಡಿದರು.

ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 22ರಂದು 26 ಮಂದಿ ಪ್ರವಾಸಿಗರನ್ನು ಬಲಿ ಪಡೆದಿದ್ದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದಕರ ಗುರಿಗಳು, ಕಾರ್ಯಾಚರಣೆಯ ಶೈಲಿ ಹಾಗೂ ಸಮಯವನ್ನು ನಿರ್ಧರಿಸುವ ಸಂಪೂರ್ಣ ಸ್ವಾತಂತ್ರ್ಯವನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News