×
Ad

ಪದ್ಮ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Update: 2024-01-26 11:37 IST

 ಪ್ರಧಾನಿ ನರೇಂದ್ರ ಮೋದಿ (File Photo: PTI)

ಹೊಸದಿಲ್ಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ ಸಾಧಕರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ಗಣ್ಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

"ಪದ್ಮ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಭಾರತವು ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಯನ್ನು ಗೌರವಿಸುತ್ತದೆ. ಅವರು ತಮ್ಮ ಅಸಾಧಾರಣ ಕೆಲಸದಿಂದ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಲಿ" ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News