×
Ad

ಸೆಪ್ಟೆಂಬರ್‌ನಲ್ಲಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

Update: 2025-08-31 12:34 IST

Photo | PTI

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಸೆಪ್ಟೆಂಬರ್ ಮಧ್ಯದಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮಣಿಪುರ ಬುಡಕಟ್ಟು ಹಿಂಸಾಚಾರಕ್ಕೆ ಗುರಿಯಾದ 28 ತಿಂಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಮಣಿಪುರ ರಾಜಧಾನಿ ಇಂಫಾಲ್ ಮತ್ತು ಚುರಚಂದ್‌ಪುರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. 

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ ಎಂದು ವಿಪಕ್ಷಗಳು ಹಲವು ಬಾರಿ ಆಕ್ರೋಶ ವ್ಯಕ್ತಪಡಿಸಿವೆ.  ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಸಂಸತ್ತಿನಲ್ಲಿ ಕೂಡ ವಿಪಕ್ಷಗಳು ಟೀಕಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News