×
Ad

ಜಮ್ಮುಕಾಶ್ಮೀರ: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

Update: 2025-06-06 12:46 IST

Screengrab: X/ANI

ಶ್ರೀನಗರ : ಜಮ್ಮುಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಚೆನಾಬ್ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಈ ರೈಲು ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ ಪ್ರಮುಖ ಭಾಗವಾಗಿದೆ. ಬರೋಬ್ಬರಿ 14,000 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಚೆನಾಬ್ ನದಿ ಮಟ್ಟದಿಂದ 359 ಮೀಟರ್ ಎತ್ತರದಲ್ಲಿ ಈ ಸೇತುವೆ ನಿರ್ಮಿಸಲಾಗಿದೆ.

ಇದೇ ವೇಳೆ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಶ್ರೀನಗರ ನಡುವೆ ಸಂಚರಿಸುವ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News