×
Ad

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜನ್ಮದಿನದ ಸಂಭ್ರಮ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಶುಭಾಶಯ

Update: 2024-07-21 12:38 IST

Photo:X/@RahulGandhi

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ 82ನೇ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘಾಯಸ್ಸು ಹಾಗೂ ಉತ್ತಮ ಆರೋಗ್ಯವನ್ನು ಪ್ರಾರ್ಥಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

"ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ದಣಿವರಿಯದ ಸೇವೆ ಹಾಗೂ ಜನತೆಯ ಕಲ್ಯಾಣದೆಡೆಗಿನ ಬದ್ಧತೆ ನಮಗೆ ಒಂದು ಸ್ಫೂರ್ತಿ. ಅಪಾರ ಪ್ರೀತಿ ಮತ್ತು ಆರೋಗ್ಯ ನಿಮ್ಮದಾಗಲಿ" ಎಂದು ಲೋಕಸಭಾ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ ಹಾರೈಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರನ್ನು ಖುದ್ದಾಗಿ ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಜನ್ಮದಿನಕ್ಕೆ ಶುಭ ಕೋರಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕೂಡಾ ಖರ್ಗೆ ಅವರ ಜನ್ಮದಿನಕ್ಕೆ ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News