×
Ad

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Update: 2025-09-21 11:35 IST

ಪ್ರಧಾನಿ ನರೇಂದ್ರ ಮೋದಿ (Photo: PTI) 

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಸಂಜೆ 5 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಯಾವ ವಿಚಾರ ಮಾತನಾಡಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ಆದರೆ, ನಾಳೆಯಿಂದ ದೇಶಾದ್ಯಂತ ಜಿಎಸ್‌ಟಿ ಕಡಿತ ಜಾರಿಗೆ ಬರಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿಯೇ ಪ್ರಧಾನಿ ಮೋದಿ ಜಿಎಸ್‌ಟಿ ಕಡಿತದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.

ಎಚ್-1ಬಿ ವೀಸಾಗೆ ಒಂದು ಲಕ್ಷ ಡಾಲರ್ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಈ ಕುರಿತು ಕೂಡ ಪ್ರಧಾನಿ ಭಾಷಣದಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News