×
Ad

ಭಾರತ-ಪಾಕ್ ಕದನ ವಿರಾಮ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Update: 2025-05-12 16:31 IST

ಪ್ರಧಾನಿ ನರೇಂದ್ರ ಮೋದಿ (PTI)

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಮಿಲಿಟರಿ ದಾಳಿಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭೂ ಮಾರ್ಗ, ವಾಯು ಮತ್ತು ಸಮುದ್ರ ಮಾರ್ಗದ ಮೂಲಕ ನಡೆಯುವ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವುದಾಗಿ ಭಾರತ –ಪಾಕ್ ಕದನ ವಿರಾಮ ಘೋಷಿಸಿತ್ತು. ಇಂದು ಸಂಜೆ ಈ ಕುರಿತು ಎರಡೂ ದೇಶಗಳ ಡಿಜಿಎಂಒಗಳ ಸಭೆ ನಡೆಯಲಿದೆ. ಆ ಬಳಿಕ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News