×
Ad

ಭಾರತ-ಪಾಕ್‌ ನಡುವೆ ಉದ್ವಿಗ್ನ | ರಕ್ಷಣಾ ಸಚಿವರು, ಸೇನಾಪಡೆಗಳ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ

Update: 2025-05-10 15:23 IST

Photo:X/@PMOIndia

ಹೊಸದಿಲ್ಲಿ : ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ಶನಿವಾರ ಮುಂಜಾನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಮೃತಪಟ್ಟಿದರು. ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಮೋದಿ ಸಭೆ ನಡೆಸಿದರು.

ಭಾರತದ ನಗರಗಳು, ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಪಾಕ್ ಸೇನೆ ದಾಳಿಗೆ ಯತ್ನಿಸಿದೆ. ಇದನ್ನು ಭಾರತ ಯಶಸ್ವಿಯಾಗಿ ವಿಫಲಗೊಳಿಸಿದೆ. ಶನಿವಾರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News