×
Ad

ಬಿಹಾರ | ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ; 10 ಮಂದಿ ಬಂಧನ

Update: 2025-02-18 19:13 IST

ಪಾಟ್ನಾ : ಬಿಹಾರದ ಜಮುಯಿ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಮಹಿಳೆ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಲಿಯಾಡಿಹ್ ಪ್ರದೇಶದಲ್ಲಿ ರವಿವಾರ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದು ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು.

ಈ ಕುರಿತು ಜಮುಯಿ ಜಿಲ್ಲಾಧಿಕಾರಿ ಅಭಿಲಾಷಾ ಶರ್ಮಾ ಮಾಧ್ಯಮಗಳ ಜೊತೆ ಮಾತನಾಡಿ, ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಖುಷ್ಬೂ ಪಾಂಡೆ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಧಾರ್ಮಿಕ ಮೆರವಣಿಗೆಯ ವೇಳೆ ಬಲಿಯಾಡಿಹ್ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಸ್ಥಗಿತಗೊಳಿಸಲಾಗಿದ್ದ ಇಂಟರ್‌ನೆಟ್‌ ಸೇವೆಗಳನ್ನು ಮರು ಸ್ಥಾಪಿಸಲಾಗಿದೆ. ಘಟನೆಯ ನಂತರ ಕರ್ತವ್ಯ ಲೋಪಕ್ಕಾಗಿ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾ ಪೊಲೀಸರು ಸ್ಥಳದಲ್ಲಿ ಪಥಸಂಚಲನ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ 50 ರಿಂದ 60 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News