×
Ad

ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ವ್ಯಕ್ತಿಯ ಬಂಧನ

Update: 2025-10-25 12:45 IST

Photo credit: indiatoday.in

ಪುಣೆ: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 28 ವರ್ಷದ ಮಹಿಳಾ ವೈದ್ಯೆಯೊಬ್ಬರು ತಮ್ಮ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಓರ್ವ ವ್ಯಕ್ತಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಮೃತ ವೈದ್ಯೆ ತಮ್ಮ ಅಂಗೈಯಲ್ಲಿ ಇಬ್ಬರ ಹೆಸರು ಬರೆದಿದ್ದು, ಈ ಪೈಕಿ ಪ್ರಶಾಂತ್ ಬಂಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೀಡ್ ಜಿಲ್ಲೆಯ ನಿವಾಸಿ ಹಾಗೂ ಸರಕಾರಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆಯು, ಗುರುವಾರ ರಾತ್ರಿ ಸತಾರ ಜಿಲ್ಲೆಯ ಹೋಟೆಲ್ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ತಮ್ಮ ಅಂಗೈಯಲ್ಲಿ ಬರೆದಿದ್ದ ಡೆತ್ ನೋಟ್ ನಲ್ಲಿ, ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಬದಾನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ ಹಾಗೂ ಸಾಫ್ಟ್ ವೇರ್ ಇಂಜಿನಿಯರ್ ಆದ ಪ್ರಶಾಂತ್ ಬಂಕರ್ ನನಗೆ ಮಾನಸಿಕ ಕಿರುಕುಳ ನೀಡಿದ್ದ ಎಂದು ವೈದ್ಯೆ ಆರೋಪಿಸಿದ್ದರು.

ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಬದಾನೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News