×
Ad

ಕೇರಳ ಸೇರಿದಂತೆ ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

Update: 2025-05-25 11:25 IST

Photo | NDTV

ಹೊಸದಿಲ್ಲಿ : ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ಜೂನ್ 19ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ರವಿವಾರ ತಿಳಿಸಿದೆ.

ಗುಜರಾತ್ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರ, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳ ತಲಾ ಒಂದು ಕ್ಷೇತ್ರಗಳಿಗೆ ಜೂನ್ 19ರಂದು ಉಪಚುನಾವಣೆ ನಡೆಯಲಿದೆ. ಜೂನ್ 23ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗುಜರಾತ್‌ನ ಕಾಡಿ ಕ್ಷೇತ್ರದಲ್ಲಿ ಶಾಸಕ ಕರ್ಸನ್‌ ಭಾಯ್‌ ಅವರ ನಿಧನದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ವಿಸಾವದರ್ ಕ್ಷೇತ್ರದಲ್ಲಿ ಶಾಸಕ ಭಯಾನಿ ಭೂಪೇಂದ್ರಭಾಯಿ ಗಂಡುಭಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಕೇರಳದಲ್ಲಿ ಶಾಸಕ ಪಿ ವಿ ಅನ್ವರ್ ಅವರ ರಾಜೀನಾಮೆಯಿಂದ ತೆರವಾದ ನಿಲಂಬೂರ್ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಪಂಜಾಬ್‌ನ ಲುಧಿಯಾನ ಕ್ಷೇತ್ರದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದ ತೆರವಾದ ಸ್ಥಾನದಲ್ಲಿ ಉಪಚುನಾವಣೆ ನಡೆಯಲಿದೆ.

ಪಶ್ಚಿಮ ಬಂಗಾಳದ ಕಾಳಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ನಾಸಿರುದ್ದೀನ್ ಅಹಮದ್ ಅವರ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News