×
Ad

ಕೇರಳ | ಕೊಟ್ಟಾಯಂ ಸರಕಾರಿ ವೈದ್ಯಕೀಯ ಕಾಲೇಜು ಕಟ್ಟಡ ಕುಸಿತ: ಮಹಿಳೆ ಮೃತ್ಯು, ಮೂವರಿಗೆ ಗಂಬೀರ ಗಾಯ

Update: 2025-07-04 12:26 IST

Photo credit: manoramaonline.com

ಕೊಟ್ಟಾಯಂ: ಕೇರಳದ ಕೊಟ್ಟಾಯಂ ಸರಕಾರಿ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡದ ಭಾಗವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟು, ಓರ್ವ ಬಾಲಕಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂದು (52) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಅಲೀನಾ (11), ಅಮಲ್ ಪ್ರದೀಪ್ (20) ಹಾಗೂ ಜಿನು ಸಾಜಿ (38) ಎಂದು ಗುರುತಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಅಲಿನಾ ಹಾಗೂ ಜಿನು ಸಾಜಿ ಎಂಬ ಮಹಿಳೆಯ ಪರಿಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬಿಂದು ಅವರ ಮೊಮ್ಮಗಳು ಅಲೀನಾರನ್ನು ಈ ಆಸ್ಪತ್ರೆಗೆ ಕರೆ ತರಲಾಗಿತ್ತು. ಇದೇ ವೇಳೆ ಅಮಲ್ ಪ್ರದೀಪ್, ಜಿನು ಸಾಜಿ ಎನ್ನುವವರೂ ಅದೇ ಕಟ್ಟಡದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಸಿದಿರುವ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ಹೇಳಿದ್ದಾರೆ.

ಕಟ್ಟಡ ಕುಸಿದು ಎರಡು ಗಂಟೆಗೂ ಹೆಚ್ಚು ಕಾಲ ಕಳೆದ ನಂತರ, ವಿಳಂಬವಾಗಿ ಪರಿಹಾರ ಕಾರ್ಯಾಚರಣೆ ಪ್ರಾರಂಭಗೊಂಡಿದ್ದರಿಂದು ಬಿಂದು ಅವರು ಮೃತಪಟ್ಟಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ. ಘಟನೆಯನ್ನು ಖಂಡಿಸಿ ವಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಸುದ್ದಿ ತಿಳಿಯುತ್ತಿದ್ದಂತೆಯೆ, ಕಟ್ಟಡ ಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್, ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಆದೇಶಿಸಿದ್ದಾರೆ. ಈ ವೇಳೆ, ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದೂ ಘೋಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News