ಪಹಲ್ಗಾಮ್ ದಾಳಿ | ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಮಾಹಿತಿ ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ
Update: 2025-05-13 12:28 IST
Photo credit: indiatvnews.com
ಹೊಸದಿಲ್ಲಿ: ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಭಯೋತ್ಪಾದಕರ ಪೋಟೊಗಳನ್ನು ಜಮ್ಮುಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಶಂಕಿತರ ಬಗ್ಗೆ ಸುಳಿವು ನೀಡುವವರಿಗೆ 20ಲಕ್ಷ ರೂ.ಬಹುಮಾನ ಘೋಷಿಸಿದ್ದಾರೆ.
ಇದಕ್ಕೂ ಮೊದಲು ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್, ಪಾಕಿಸ್ತಾನಿ ಪ್ರಜೆ ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು.
ಎ.22ರಂದು ಪಹಲ್ಗಾಮ್‌ನಿಂದ ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. 2019ರ ಪುಲ್ವಾಮಾ ಹತ್ಯಾಕಾಂಡದ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿತ್ತು.