×
Ad

ಪವರ್ ಟಿವಿ | ಕರ್ನಾಟಕ ಹೈಕೋರ್ಟ್ ವಿಧಿಸಿದ್ದ ನಿಷೇಧದ ಮೇಲಿನ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂಕೋರ್ಟ್

Update: 2024-07-15 19:40 IST

ಸುಪ್ರೀಂಕೋರ್ಟ್

ಹೊಸದಿಲ್ಲಿ: ಜೆಡಿಎಸ್ ನಾಯಕರ ಲೈಂಗಿಕ ಹಗರಣಗಳನ್ಮು ಪ್ರಸಾರ ಮಾಡಿದ್ದಕ್ಕೆ ಕರ್ನಾಟಕ ಹೈಕೋರ್ಟಿನಿಂದ ಪ್ರಸಾರ ನಿಷೇಧಕ್ಕೆ ಒಳಗಾಗಿದ್ದ ಕನ್ನಡ ಸುದ್ದಿವಾಹಿನಿ ಪವರ್ ಟಿವಿ ವಿರುದ್ಧದ ಆದೇಶಕ್ಕೆ ತಾನು ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಜುಲೈ 22ರವರೆಗೆ ವಿಸ್ತರಿಸಿದೆ.

ಕೇಂದ್ರ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮ್‌ಜಿತ್ ಬ್ಯಾನರ್ಜಿ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ನೀಡಿದ ಮಾಹಿತಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾರನ್ನು ಒಳಗೊಂಡಿದ್ದ ತ್ರಿಸದಸ್ಯ ನ್ಯಾಯಪೀಠವು ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತು.

ಈ ನಡುವೆ, ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಜುಲೈ 12ರಂದು ತಾನು ಮಂಜೂರು ಮಾಡಿರುವ ತಡೆಯಾಜ್ಞೆಯು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರುತ್ತದೆ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News