×
Ad

ಅಯೋಧ್ಯೆ ವಿವಾದ ಪರಿಹಾರಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೆ : ಸಿಜೆಐ ಡಿ ವೈ ಚಂದ್ರಚೂಡ್

Update: 2024-10-20 23:28 IST

Photo : PTI

ಪುಣೆ : ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದ ಪರಿಹಾರಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದೆ. ನಂಬಿಕೆ ಇದ್ದರೆ ದೇವರು ಒಂದು ಮಾರ್ಗವನ್ನು ಕಂಡುಕೊಳ್ಳುತ್ತಾನೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಹುಟ್ಟೂರಾದ ಖೇಡ್ ತಾಲೂಕಿನ ಕನ್ಹರ್ಸರ್ ಗ್ರಾಮದಲ್ಲಿ ಮಾತನಾಡಿದ ಡಿವೈ ಚಂದ್ರಚೂಡ್, ಕೆಲ ಅಪರೂಪದ ಪ್ರಕರಣಗಳಲ್ಲಿ ನಾವು ಪರಿಹಾರಕ್ಕೆ ಬರಲು ಸಾಧ್ಯವಾಗುವುದಿಲ್ಲ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದ ಮೂರು ತಿಂಗಳ ಕಾಲ ನಮ್ಮ ಪೀಠದ ಮುಂದೆ ಇದ್ದಾಗ ಇದೇ ರೀತಿಯ ಘಟನೆ ಸಂಭವಿಸಿದೆ. ನಾನು ದೇವರ ಮುಂದೆ ಕುಳಿತುಕೊಂಡೆ ಮತ್ತು ದೇವರೇ ಪರಿಹಾರ ನೀಡಬೇಕು ಎಂದು ಕೇಳಿಕೊಂಡಿದ್ದೆ. "ನನ್ನನ್ನು ನಂಬಿರಿ, ನಿಮಗೆ ನಂಬಿಕೆ ಇದ್ದರೆ, ದೇವರು ಯಾವಾಗಲೂ ಒಂದು ಮಾರ್ಗವನ್ನು ಕಂಡುಕೊಳ್ಳುತ್ತಾನೆ" ಎಂದು ಹೇಳಿದ್ದಾರೆ.

2019ರ ನ.9ರಂದು ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಡುವ ಮೂಲಕ ಶತಮಾನಕ್ಕೂ ಹಳೆಯ ಪ್ರಕರಣದ ತೀರ್ಪು ನೀಡಿತ್ತು. ಸಿಜೆಐ ಡಿವೈ ಚಂದ್ರಚೂಡ್ ಈ ತೀರ್ಪು ನೀಡಿದ ಪೀಠದ ಭಾಗವಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News