×
Ad

ಮಧ್ಯಪ್ರದೇಶ : ಗರ್ಭಿಣಿಯ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Update: 2024-02-17 22:03 IST

ಭೋಪಾಲ: ಮೂವತ್ನಾಲ್ಕು ವರ್ಷದ ಗರ್ಭಿಣಿಯ ಸಾಮೂಹಿಕ ಅತ್ಯಾಚಾರೆಗೈದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ಮೊರಾನಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶೇ. 80ರಷ್ಟು ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಗ್ವಾಲಿಯರ್ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಘಟನೆ ಅಂಬಾಹ್ ಪಟ್ಟಣದಿಂದ 3 ಕಿ.ಮೀ. ದೂರದಲ್ಲಿರುವ ಚಾಂದ್ ಕಾ ಪುರಾ ಗ್ರಾಮದಲ್ಲಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ತನ್ನ ಪತಿಯ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆಯೊಂದಿಗೆ ರಾಜಿ ಮಾತುಕತೆ ನಡೆಸಲು ಮಹಿಳೆ ಚಾಂದ್ ಕಾ ಪುರಾ ಗ್ರಾಮಕ್ಕೆ ತೆರಳಿದ್ದಳು. ಈ ಸಂದರ್ಭ ಮಹಿಳೆಯ ಮನೆಯಲ್ಲಿದ್ದ ಮೂವರು ಆಕೆಯ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಅಂಬಾಹ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಲೋಕ್ ಪರಿಹಾರ್ ತಿಳಿಸಿದ್ದಾರೆ.

ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆದರೆ, ಪೊಲೀಸರು ಇದುವರೆಗೆ ಹೇಳಿಕೆ ದಾಖಲಿಸಿಕೊಂಡಿಲ್ಲ. ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News