ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 33.50 ರೂ. ಇಳಿಕೆ
Update: 2025-08-01 12:32 IST
ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ತೈಲ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಗಳ ದರವನ್ನು 33.50 ರೂ. ಇಳಿಕೆ ಮಾಡಿದ್ದು, ಇದೀಗ ಆಗಸ್ಟ್ 1ರಿಂದ ದಿಲ್ಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ 1,631.50 ರೂ.ಗೆ ಇಳಿಕೆಯಾಗಿದೆ.
ಆದರೆ, 14.2 ಕೆಜಿ ತೂಕದ ಗೃಹೋಪಯೋಗಿ ಅಡುಗೆ ಅನಿಲ ಸಿಲಿಂಡರ್ ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.