×
Ad

ಪ್ರಧಾನಿ ಭೇಟಿ: ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ

Update: 2024-02-18 21:27 IST

ನರೇಂದ್ರ ಮೋದಿ | Photo: PTI 

ರಾಂಚಿ : ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿಗೆ ಮಂಗಳವಾರ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

ನಗರ ಹಾಗೂ ಇತರೆಡೆಯ 12ಕ್ಕೂ ಅಧಿಕ ಸ್ಥಳಗಳಲ್ಲಿ ಪೊಲೀಸರು ಹಾಗೂ ಅರಸೇನಾ ಪಡೆಗಳು ವಾಹನಗಳ ಪರಿಶೀಲನೆ ನಡೆಸುತ್ತಿವೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದ ಆಗಮನ ಹಾಗೂ ನಿರ್ಗಮನ ಕೇಂದ್ರಗಳಲ್ಲಿ ವಿಶೇಷ ಪರಿಶೀಲನಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಅವರು ಜಮ್ಮು ವಲಯಕ್ಕೆ ಭೇಟಿ ನೀಡುತ್ತಿದ್ದರೂ ಈ ಸಂದರ್ಭ ಜಮ್ಮು ಹಾಗೂ ಕಾಶ್ಮೀರದಲ್ಲಿ ಶಂಕಿತ ಭಯೋತ್ಪಾದಕರು ಯಾವುದೇ ರೀತಿಯ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಭದ್ರತಾ ಸಂಸ್ಥೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ ಎಂದು ಅವರು ತಿಳಿಸಿದ್ದಾರೆ.

ಮೋದಿ ಅವರು ತನ್ನ ಎರಡನೇ ಬಾರಿಯ ಅಧಿಕಾರಾವಧಿಯಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News