×
Ad

ವಯನಾಡು ಉಪಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

Update: 2024-10-23 13:44 IST

Screengrab:X/@PTI_News

ಕೇರಳ: ವಯನಾಡು ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಕಾಂಗ್ರೆಸ್ ಮುಖಂಡರ ಜೊತೆ ತೆರಳಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮುಂಚಿತವಾಗಿ ಕಲ್ಪೆಟ್ಟಾ ಬಸ್ ನಿಲ್ದಾಣದಿಂದ ರೋಡ್ ಶೋ ನಡೆಸಿದ ಪ್ರಿಯಾಂಕಾ ಗಾಂಧಿಗೆ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದರು.

ಬಿಜೆಪಿಯ ನವ್ಯಾ ಹರಿದಾಸ್, ಎಲ್ ಡಿಎಫ್ ಅಭ್ಯರ್ಥಿ ಸತ್ಯನ್ ಮೊಕೇರಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಲಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News