×
Ad

ವಯನಾಡ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

Update: 2024-11-28 11:17 IST

ಪ್ರಿಯಾಂಕಾ ಗಾಂಧಿ (Screengrab: Sansad TV)

ಹೊಸದಿಲ್ಲಿ: ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದಕ್ಕೂ ಮುನ್ನ, ತಮ್ಮ ನಿವಾಸದಿಂದ ಲೋಕಸಭೆಗೆ ಹೊರಟ ಪ್ರಿಯಾಂಕಾ ಗಾಂಧಿ ವಾದ್ರಾರ ಕಾರಿನ ಮೇಲೆ ಅವರ ಬೆಂಬಲಿಗರು ಪುಷ್ಪವೃಷ್ಟಿ ನಡೆಸಿದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News