'ಮಾನವ ಹಕ್ಕುಗಳ ಉಲ್ಲಂಘನೆ': ಪ್ರೊಫೆಸರ್ ಅಲಿ ಖಾನ್ ಬಂಧನಕ್ಕೆ ಸಂಬಂಧಿಸಿ ಹರ್ಯಾಣ ಪೊಲೀಸರಿಗೆ NHRC ನೋಟಿಸ್
Update: 2025-05-21 17:17 IST
ಅಲಿ ಖಾನ್ | PC : X
ಹೊಸದಿಲ್ಲಿ : ಹರ್ಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿರುವ ಬಗ್ಗೆ ಮಾಧ್ಯಮ ವರದಿಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ.
ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಬಂಧನದ ಮೂಲಕ ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು NHRC ಆರೋಪಿಸಿದೆ. ಈ ಕುರಿತು ಹರ್ಯಾಣದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಒಂದು ವಾರದೊಳಗೆ ವಿವರವಾದ ವರದಿಯನ್ನು ನೀಡುವಂತೆ ಸೂಚಿಸಿದೆ.
ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ಗೆ ಸಂಬಂಧಿಸಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಬುಧವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಪೋಸ್ಟ್‌ಗೆ ಸಂಬಂಧಿಸಿ ತನಿಖೆಗೆ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್ಐಟಿ)ರಚಿಸಿದೆ.