ಮಹಾರಾಷ್ಟ್ರ | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ: ನಟಿಯ ಬಂಧನ
ಇಬ್ಬರು ಕಿರುತೆರೆ ನಟಿಯರ ರಕ್ಷಣೆ
ಸಾಂದರ್ಭಿಕ ಚಿತ್ರ
ಠಾಣೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ನಟಿಯೊಬ್ಬಳನ್ನು ಗುರುವಾರ ರಾತ್ರಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದ್ದು, ಈಕೆ ಚಲನಚಿತ್ರ ಹಾಗೂ ಕಿರುತೆರೆ ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುತ್ತಿದ್ದಳು. ನಟಿಯರಾಗಲು ಬಯಸಿ ಬರುವ ಯುವತಿಯರನ್ನು ಬಲವಂತವಾಗಿ ಹಾಗೂ ಆಕ್ರಮವಾಗಿ ಈ ವೃತ್ತಿಗೆ ದೂಡುತ್ತಿದ್ದಳು ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿಯನ್ನಾಧರಿಸಿ, ರಹಸ್ಯ ಕಾರ್ಯಾಚರಣೆ ನಡೆಸುವ ಮೂಲಕ ಅನುಷ್ಕಾ ಮೋನಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರೂ ಕೂಡಾ ಕಿರುತೆರೆ ಧಾರಾವಾಹಿ ಹಾಗೂ ಬಾಂಗ್ಲಾ ಸಿನಿಮಾಗಳಲ್ಲಿ ನಟಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.
ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿರುವ ಮಾಲ್ ನಲ್ಲಿ ಅನುಷ್ಕಾ ಯುವತಿಯರನ್ನು ಗಿರಾಕಿಗಳಿಗೆ ಭೇಟಿ ಮಾಡಿಸುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ದೂರು ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಲ್ಲಾಳ್ ಹೇಳಿದ್ದಾರೆ.