ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಅಲಿಯಾ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Update: 2025-04-11 20:25 IST
Photo | ANI
ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಕೋಲ್ಕತ್ತಾದ ಅಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಕಾಯಿದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಅಲಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಿಂದ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
‘ಬಿಜೆಪಿಯವರು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಎಂದು ಹೇಳುತ್ತಾರೆ. ಆದರೆ, ಒಂದು ಸಮುದಾಯವನ್ನು ಗುರಿಯಾಗಿಸಿ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆರೋಪಿಸಿದರು.
ಇದಲ್ಲದೆ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಜೈಪುರ ಸೇರಿದಂತೆ ದೇಶದ ವಿವಿಧೆಡೆ ಹಲವು ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದೆ. ಕಾಯಿದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದೆ.